ಪ್ರಾದೇಶಿಕ ಆಯುಕ್ತರ ಕಛೇರಿ ಕಾರ್ಯಾನಿರ್ವಹಣೆ


 • ಸಿಬ್ಬಂದಿಗಳ ನಿರ್ವಹಣೆ, ಅಭಿವೃದ್ಧಿ, ತರಬೇತಿ ಮತ್ತು ಕಂದಾಯ ಇಲಾಖೆಯ ಮಾನವ ಸಂಪನ್ಮೂಲದ ಇತರೆ ವಿಷಯಗಳು.
 • ಜಿಲ್ಲಾ, ಉಪವಿಭಾಗ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮಮಟ್ಟದ ಕಂದಾಯದ ಲೆಕ್ಕ ಮತ್ತು ಲೆಕ್ಕಪರಿಶೋಧನೆಗಳ ನಿರ್ವಹಣೆ, ವಾರ್ಷಿಕ ತಪಾಸಣೆ, ಅನಿರೀಕ್ಷಿತ ತಪಾಸಣೆ ಹಾಗೂ ಪರಿಶೀಲನೆ ಮತ್ತು ವಾರ್ಷಿಕ ಕಡ್ಡಾಯ ಜಮಾಬಂದಿ ನಡೆಸುವುದು.
 • ಈ ಹಿಂದೆ ವಿಭಾಗಾಧಿಕಾರಿಗಳು ವಿವಿಧ ನಿಯಮ- ಅಧಿನಿಯಮಗಳಡಿ ಚಲಾಯಿಸುತ್ತಿದ್ದ ಶಾಸನಬದ್ದ (ಮೇಲ್ಮನವಿ ಮತ್ತು ಪನರಾವಲೋಕನ) ಅಧಿಕಾರ;
 • ನೋಂದಣೆ ಮತ್ತು ಮುದ್ರಾಂಕ ಶುಲ್ಕ, ಭೂ ಮಾಪನ ಮತ್ತು ಭೂ ದಾಖಲೆಗಳ ಕಾರ್ಯ, ಮುಜರಾಯಿ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದ ಕೆಲಸಗಳ ಮೇಲುಸ್ತುವಾರಿ ಅಧಿಕಾರ;
 • ತಪಾಸಣಾ ಪ್ರಾಧಿಕಾರ:- ಅಧೀನ ಕಛೇರಿಗಳಲ್ಲಿ ಕಾನೂನುಬದ್ಧವಾಗಿ, ಸರ್ಕಾರದ ಸೂಚನೆ/ ಆಜ್ಞೆಯ ಪ್ರಕಾರ ಮತ್ತು ಸ್ಥಾಯೀ ಆದೇಶಗಳನ್ವಯ ಕೆಲಸ/ ಕಾರ್ಯನಿರ್ವಹಣೆ ಆಗುತ್ತಿದೆ ಎಂಬ ಬಗ್ಗೆ ತಪಾಸಣೆ ನಡೆಸುವುದು;
 • ಪ್ರಕೃತಿ ವಿಕೋಪ ಮತ್ತು ಬರಪರಿಹಾರ ವಿಷಯಗಳ ಮೇಲ್ವಿಚಾರಣೆ, ನಿಯಂತ್ರಣ ಮತ್ತು ಬೆಳೆ ಕಟಾವು ಪ್ರಯೋಗ ಹಾಗೂ ಭೂ ಕಂದಾಯ ಮಾಫಿ ಕಾರ್ಯಗಳ ಮೇಲುಸ್ತುವಾರಿ;
 • Sರಾಜ್ಯದಲ್ಲಿನ ಎಲ್ಲಾ ರೀತಿಯ ಚುನಾವಣೆಗಳ ಮೇಲ್ವಿಚಾರಣೆ;
 • ಭೂ ಮಂಜೂರಾತಿ, ಭೂ ಸ್ವಾಧಿನ, ಭೂ ಸುಧಾರಣೆ, ಭೂ ಕಂದಾಯ ವಸೂಲಿ, ಭೂ ಮಾಪನ ಮತ್ತು ಕಂದಾಯ ಇಲಾಖೆಯ ಗಣಕೀಕರಣ ಕಾರ್ಯಗಳ ಮೇಲುಸ್ತುವಾರಿ;
 • ತಮ್ಮ ಕಾರ್ಯಕ್ಷೇತ್ರದಲ್ಲಿ ಬರುವ ಜಿಲ್ಲೆ, ಉಪವಿಭಾಗ ಮತ್ತು ತಾಲ್ಲೂಕು ಕಛೇರಿಗಳಿಗೆ ಹಣಕಾಸು ಬಿಡುಗಡೆ, ವಾರ್ಷಿಕ ಆಯವ್ಯಯ ತಯಾರಿಕೆ, ಶಾಸನ ಸಭೆಗಳ ಪ್ರಶ್ನೆಗಳಿಗೆ ಉತ್ತರಿಸುವುದು ಹಾಗೂ ಶಾಸಕಾಂಗ ಉಪಸಮಿತಿಗಳಿಗೆ ವರದಿ ನೀಡುವುದು ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲಿಸುವುದು;
 • ತಮ್ಮ ಕಕ್ಷೆಯಲ್ಲಿ ಬರುವ ಎಲ್ಲಾ ಸರ್ಕಾರಿ ಇಲಾಖೆಗಳ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕನಿಷ್ಠ ತಿಂಗಳಿಗೊಮ್ಮೆಯಂತೆ ವಿಮರ್ಷಿಸುವುದು ಹಾಗೂ ಪರಿಶೀಲಿಸುವುದು;
 • ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಲ್ಲಿ ಕೊರತೆಯಾದಲ್ಲಿ ಕಾರಣಗಳನ್ನು ಕಂಡುಹಿಡಿದು ಸಕಾಲಿಕ ಪರಿಹಾರೋಪಾಯಗಳನ್ನು ಸೂಚಿಸಿ ಅದರಂತೆ ಕ್ರಮಜರುಗಿಸುವುದು. ಅದಕ್ಕೆ ಸಮಬಂಧಿಸಿದಂತೆ ಇಲಾಖಾ ಮುಖ್ಯಸ್ಥರು ಹಾಗೂ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸುವುದು.
 • ಇದೂ ಅಲ್ಲದೆ, ಅಭಿವೃದ್ಧಿ ಇಲಾಖೆಗಳ ತಪಾಸಣೆ, ತನಿಖೆ ಹಾಗೂ ಅವಶ್ಯವಿದ್ದಲ್ಲಿ ಪರಿವೀಕ್ಷಣೆ ನಡೆಸುವುದು;